ಹುಲಿ ಗಣತಿ ಕ್ಯಾಮೆರಾ ಕಳ್ಳ ಸಿಕ್ಕಿಬಿದ್ದ; ಎರಡು ಕ್ಯಾಮೆರಾ ವಶ

ಹುಲಿ ಗಣತಿ ಕ್ಯಾಮೆರಾ ಕಳ್ಳ ಸಿಕ್ಕಿಬಿದ್ದ; ಎರಡು ಕ್ಯಾಮೆರಾ ವಶ
ಅಂಕೋಲಾ ಪೊಲೀಸರ ಕಾರ್ಯಾಚರಣೆ ಯಶಸ್ವಿ; ಕಳವಾದ ಕ್ಯಾಮೆರಾ ವಶಕ್ಕೆ
ಅಂಕೋಲಾ : ಹುಲಿ ಗಣತಿ ಕಾರ್ಯಕ್ಕಾಗಿ ಅರಣ್ಯದಲ್ಲಿ ಅಳವಡಿಸಲಾಗಿದ್ದ ಎರಡು ಕ್ಯಾಮೆರಾಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಅಂಕೋಲಾ ಪೊಲೀಸರು ಬಂಧಿಸಿ, ಕಳವಾದ ಕ್ಯಾಮೆರಾಗಳನ್ನು ವಶಪಡಿಸಿಕೊಂಡಿದ್ದಾರೆ.

ಹಿಲ್ಲೂರು ಗ್ರಾಮದ ಕೊಳಗಿಯ ದುರ್ಗಾ ದೇವು ಹರಿಕಂತ್ರ (53) ಬಂಧಿತ ಆರೋಪಿ. ಈತನಿಂದ ಅರಣ್ಯ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ ಸುಮಾರು ₹50 ಸಾವಿರ ಮೌಲ್ಯದ ಎರಡು ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಪಿಐ ಚಂದ್ರಶೇಖರ ಮಠಪತಿ ಅವರ ನೇತ್ರತ್ವದಲ್ಲಿ ಪಿಎಸೈ ವಿಶ್ವನಾಥ ನಿಂಗೊಳ್ಳಿ, ಅಫರಾಧ ಪತ್ತೆದಳದ ಸಿಬ್ಬಂದಿಗಳಾದ ಮಾದೇವ ಸಿದ್ದಿ, ಪ್ರಶಾಂತ ನಾಯ್ಕ, ಭಗವಾನ್ ಗಾಂವಕರ, ಆಸೀಪ್ ಕುಂಕುರ, ಗಿರೀಶ ಲಮಾಣಿ ಕಾರ್ಯಾಚರಣೆಯಲ್ಲಿ ಇದ್ದರು.
ಮೇ 1ರಿಂದ 25ರವರೆಗೆ ನಡೆದ ಅಖಿಲ ಭಾರತ ಹುಲಿ ಗಣತಿ (ಆಲ್ ಇಂಡಿಯಾ ಟೈಗರ್ ಎಸ್ಟಿಮೇಶನ್) ಕಾರ್ಯಾಚರಣೆಯ ಅಂಗವಾಗಿ ಹೊಸಕಂಬಿ ವಲಯದ ಮಾಣಿಕಾರ–ತಿಂಗಳಬೈಲ್ ಅರಣ್ಯ ಪ್ರದೇಶದಲ್ಲಿ ‘ಕಡಿಬ್ಯಾಕ್‘ ಕಂಪನಿಯ ಎರಡು ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಅರಣ್ಯ ಸಿಬ್ಬಂದಿ ಪ್ರತಿ ಐದು ದಿನಗಳಿಗೊಮ್ಮೆ ಮೆಮೊರಿ ಕಾರ್ಡ್ ಬದಲಾಯಿಸಿ, ಅದರಲ್ಲಿ ದಾಖಲಾಗಿದ್ದ ಮಾಹಿತಿಯನ್ನು ರೇಂಜ್ ಅರಣ್ಯ ಕಚೇರಿಯ ಕಂಪ್ಯೂಟರ್ಗೆ ವರ್ಗಾಯಿಸುತ್ತಿದ್ದರು.

ಮೇ 1 ರಿಂದ 25 ರವರೆಗೆ ಆಲ್ ಇಂಡಿಯಾ ಟೈಗರ್ ಎಸ್ಟಿಮೇಶನ್ ಕಾರ್ಯಾಚರಣೆ ನಡೆಯುತ್ತಿತ್ತು. ಇದರ ಭಾಗವಾಗಿ ಹೊಸಕಂಬಿ ವಲಯದ ಮಾಣಿಕಾರ ತಿಂಗಳಬೈಲ್ ಅರಣ್ಯ ಪ್ರದೇಶದಲ್ಲಿ `ಕಡಿಬ್ಯಾಕ್‘ ಕಂಪನಿಯ ಎರಡು ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಪ್ರತಿ ಐದು ದಿನಗಳಿಗೊಮ್ಮೆ ಕ್ಯಾಮೆರಾದ ಮೆಮೊರಿ ಕಾರ್ಡ್ ಬದಲಾಯಿಸಿ, ಅದರಲ್ಲಿನ ಮಾಹಿತಿಯನ್ನು ರೇಂಜ್ ಫಾರೆಸ್ಟ್ ಕಚೇರಿಯ ಕಂಪ್ಯುಟರಿನಲ್ಲಿ ದಾಖಲು ಮಾಡಲಾಗುತ್ತಿತ್ತು. ಮೇ 11 ರಂದು ಕೊನೆಯದಾಗಿ ಡೇಟಾ ಸಂಗ್ರಹಣೆ ನಡೆಸಲಾಗಿತ್ತು. ಮೇ 12 ರಂದು ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಕ್ಯಾಮೆರಾ ಅಲ್ಲಿಯೇ ಇತ್ತು.
ಆದರೆ, ಮೇ 13 ರಂದು ಕರ್ತವ್ಯಕ್ಕೆ ಹೋದ ಸಿಬ್ಬಂದಿಗೆ ಕ್ಯಾಮೆರಾ ನಾಪತ್ತೆಯಾಗಿತ್ತು. ಎಲ್ಲಾ ಕಡೆ ಹುಡುಕಿದರೂ ಸಿಕ್ಕಿಲ್ಲ. ಈ ಹಿನ್ನಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.
ಸುಮಾರು 50 ಸಾವಿರ ಮೌಲ್ಯದ ಎರಡು ಕ್ಯಾಮೆರಾ ಕಾಣೆಯಾದ ಬಗ್ಗೆ ಉಪವಲಯ ಅರಣ್ಯಾಧಿಕಾರಿ ರಾಘವೇಂದ್ರ ಗುರುರಾಜ ಜಿರಗಾಳೆ ದೂರು ನೀಡಿದ್ದರು. ಪಿಎಸೈ ವಿಶ್ವನಾಥ ನಿಂಗೊಳ್ಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.. ಪಿಎಸೈ ವಿಶ್ವನಾಥ ನಿಂಗೊಳ್ಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

